ರೈತರ ಸಾಲ ತೀರಿಸಿದ ಅಮಿತಾಬ್ ಬಚ್ಚನ್!

ರೈತರ ಸಾಲ ತೀರಿಸಿದ ಅಮಿತಾಬ್ ಬಚ್ಚನ್!

ಮುಂಬೈ, ಜೂನ್. 13: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಸುಮಾರು ಬಿಹಾರ ರಾಜ್ಯದ 2,100 ಬಡ ರೈತರ ಸಾಲ ತೀರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.  ಈ ಬಗ್ಗೆ ಅಮಿತಾಬ್ ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಜೊತೆಗೆ ಮಗ ಅಭಿಷೇಕ್ ಹಾಗೂ ಮಗಳು ಶ್ವೇತಾ ಜೊತೆಯಿರುವ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 2,100 ರೈತರ ಸಾಲವನ್ನು ಮರು ಪಾವತಿಸಲಾಗಿದೆ. ಇನ್ನು ಕೆಲವರಿಗೆ ವೈಯಕ್ತಿಕವಾಗಿ ಕರೆದು ಶ್ವೇತಾ ಹಾಗೂ ಅಭಿಷೇಕ್ ಅವರ ಮೂಲಕ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಅಮಿತಾಬ್ ಬಚ್ಚನ್ ಉತ್ತರ ಪ್ರದೇಶದ 1,398 ರೈತರ 3.99 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಿದ್ದರು. ಅದಕ್ಕೂ ಮೊದಲು 350 ರೈತರ ಸಾಲವನ್ನು ಪಾವತಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos