ಶಿವಮೊಗ್ಗ, ಜು. 2 : ಬಳ್ಳಾರಿಯಿಂದಲೇ ಶಾಸಕರ ರಾಜೀನಾಮೆ ಪರ್ವ ಆರಂಭವಾಗಲಿದೆ ಎಂದು ನಾನು ಹೇಳಿದ್ದ ಭವಿಷ್ಯ ನಿಜವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನಲೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ಪರ್ವ ಇದೀಗ ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಜಿಂದಾಲ್ಗೆ ಭೂಮಿ ಹಸ್ತಾಂತರ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಜಿಂದಾಲ್ ಪರ ಮಾತನಾಡಿದ್ದ ಅವರು ಸ್ವಾಭಿಮಾನಿಗಳಿಗೆ ಧಕ್ಕೆಯನ್ನುಂಟು ಮಾಡಿದೆ. ಬೇಸರಗೊಂಡು ಇದೀಗ ರಾಜೀನಾಮೆ ನೀಡಿದ್ದಾರೆ.
ಶಾಸಕರು ಸಂಪರ್ಕ ಇಲ್ಲ : ಆನಂದ್ ಸಿಂಗ್ ಸೇರಿದಂತೆ ಯಾವ ಕಾಂಗ್ರೆಸ್ ಶಾಸಕರನ್ನು ನಾವು ಇದುವರೆಗೂ ಸಂಪರ್ಕ ಮಾಡಿಲ್ಲ. ಸರ್ಕಾರದ ಮೇಲಿನ ಅಸಮಾಧಾನದಿಂದ ಅವರಾಗಿಯೇ ರಾಜೀನಾಮೆ ಸಲ್ಲಿಸುತ್ತಿದ್ದಾರೆಯೋ ಹೊರತು, ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.