ಮನವೊಲಿಸಲು ಸುಧಾಕರ್ ಬಂದಿದ್ರಾ

ಮನವೊಲಿಸಲು ಸುಧಾಕರ್ ಬಂದಿದ್ರಾ

ಬೆಂಗಳೂರು, ಜು. 9 : ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಇಂದು ಮುಂಜಾನೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಾಯಕರುಗಳನ್ನು ಬೆಂಗಳೂರಿಗೆ ಕರೆಸಿಕೊಂಡು ಸುಧಾಕರ್ ಮುಂದಿನ ನಡೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಗುಪ್ತ ಸ್ಥಳದಲ್ಲಿ ತಮ್ಮ ಕ್ಷೇತ್ರದ ಮುಖಂಡರೊಂದಿಗೆ ಚರ್ಚೆ ನಡೆಸಿ ತಿರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಧಾಕರ್ ಅವರು ಯಾರ ಸಂಪರ್ಕಕ್ಕೆ ಸಿಗದ ಕಾರಣ ಅವರು ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಶಾಸಕ ಸುಧಾಕರ್ ಹಲವು ಸಂದರ್ಭಗಳಲ್ಲಿ ರೆಬೆಲ್ ಆಗಿದ್ದರು. ಈಗ ಮತ್ತೆ ರೆಬೆಲ್ ಆಗುತ್ತಾರಾ ಎಂಬ ಅನುಮಾನ ಎಲ್ಲರಲ್ಲೂ ಮೂಡಿದೆ.
ಸುಧಾಕರ್ ಸೋಮವಾರ ಎಂಟಿಬಿ ನಾಗರಾಜ್ ಅವರ ಜೊತೆ ಸುದೀರ್ಘ 4 ತಾಸು ಚರ್ಚೆ ನಡೆಸಿದ್ದರು. ಸುಧಾಕರ್ ರಾಜೀನಾಮೆ ಕೊಡುತ್ತಾರೆ ಅಂತಲೇ ಎಂಟಿಬಿ ನಾಗರಾಜ್ ಮನವೊಲಿಸಲು ಬಂದಿದ್ರಾ ಎಂಬ ಪ್ರಶ್ನೆ ಈಗ ಶುರುವಾಗಿದೆ. ಸದ್ಯ ಶಾಸಕ ಸುಧಾಕರ್ ಅವರ ನಡೆ ಎಲ್ಲರಿಗೂ ಕುತೂಹಲ ಮೂಡಿಸಿದೆ.
ಸುಧಾಕರ್ ಇಂದು ಬೆಳಗ್ಗೆ 11 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos