ಬೆಂಗಳೂರು , ಜು. 19 : ವಿಶ್ವಾಸಮತಯಾಚನೆ ಮಾಡಬೇಕೆಂದು ಆದೇಶ ಕೊಟ್ಟಿರುವ ರಾಜ್ಯಪಾಲರ ಆದೇಶಕ್ಕೆ ದೋಸ್ತಿಗಳು ಡೋಂಟ್ ಕೇರ್ ಎಂದಿದ್ದಾರೆ. ರಾಜ್ಯಪಾಲರು ಸಿಎಂಗೆ ಶುಕ್ರವಾರ ಮಧ್ಯಾಹ್ನ 1:30ರ ಒಳಗಡೆ ವಿಶ್ವಾಸಮತಯಾಚನೆ ಮಾಡುವಂತೆ ಆದೇಶಿಸಿದ್ದರು. ಈಗ ಈ ಆದೇಶದ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಕಾರ್ಯಾಂಗ ಮತ್ತು ಶಾಸಕಾಂಗದ ಮಧ್ಯೆ ಸಂಘರ್ಷ ಎದುರಾಗುವ ಸಾಧ್ಯತೆಯಿದೆ. ಸದನದಲ್ಲಿ ರಾಜ್ಯಪಾಲರ ಕಚೇರಿಯ ವಿಶೇಷ ಅಧಿಕಾರಿ ಉಪಸ್ಥಿತರಿದ್ದರು. ಈಗ ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:40ರವರೆಗೆ ಕಲಾಪದ ನಡೆದ ವಿವರವನ್ನು ರಾಜ್ಯಪಾಲರಿಗೆ ತಿಳಿಸಲು ರಾಜಭವನಕ್ಕೆ ತೆರಳಿದ್ದಾರೆ.
ಬೆಳಗ್ಗೆ ಸಿಎಂ ಮಾತು ಆರಂಭಿಸುವಾಗ ಇಂದು ವಿಶ್ವಾಸಮತ ನಡೆಯಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ ಕೃಷ್ಣಬೈರೇಗೌಡರು ಎಂದು ನಿಂತು ರಾಜ್ಯಪಾಲರಿಗೆ ವಿಶ್ವಾಸ ಮತಯಾಚನೆ ಮಾಡುವಂತೆ ಹೇಳುವ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿ ಸರ್ಕಾರದ ಪರ ಮಾತನಾಡಿದರು.