ವಿಧಾನಸಭೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ವಿಧಾನಸಭೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು, ಜು.27 : ಜುಲೈ 29 ಮತ್ತು 30ರಂದು ನಡೆಯಲಿರುವ ಅಧಿವೇಶನದ ನಿಮಿತ್ಯ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜುಲೈ 29ರ ಬೆಳಗ್ಗೆ 6ರಿಂದ ಜುಲೈ 30ರ ಮಧ್ಯರಾತ್ರಿ ತನಕ ನಿಷೇದಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದರು.
ರಾಜಕೀಯ ಪಕ್ಷದ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಕಾರಣದಿಂದಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕರಿಗೆ ಶಾಂತಿ ಭಂಗವಾಗದಂತೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣದಿಂದಾಗಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು, ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸಬಾರದು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos