ಇಂದು, ನಾಳೆ ಶಾಲೆ ಕಾಲೇಜುಗಳಿಗೆ ರಜೆ

ಇಂದು, ನಾಳೆ ಶಾಲೆ ಕಾಲೇಜುಗಳಿಗೆ ರಜೆ

ಧಾರವಾಡ, ಆ. 6: ಎರಡು ದಿನಗಳಿಂದ ಅರುಣನ ಆರ್ಭಟಕ್ಕೆ ಜನ ಜೀವನ ತತ್ತರಿಸಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯೊಂದಿಗೆ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಅವರು ದೀಪಾ ಚೋಳನ್ ರಜೆ ಆದೇಶ ಹೊರಡಿಸಿದ್ದಾರೆ.

ಈ ಎರಡು ರಜಾ ದಿನಗಳನ್ನು ಮುಂಬರುವ ರವಿವಾರ ದಿನಗಳಂದು ಕರ್ತವ್ಯ ನಿರ್ವಹಿಸಿ ಅವಧಿಗಳನ್ನು ಸರಿದೂಗಿಸಿಕೊಳ್ಳಲು ಅವರು ಸೂಚನೆ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos