ಬೆಂಗಳೂರಿನಲ್ಲೂ ರೆಡ್ ಅಲರ್ಟ್

ಬೆಂಗಳೂರಿನಲ್ಲೂ ರೆಡ್ ಅಲರ್ಟ್

ಬೆಂಗಳೂರು, ಆ.10: ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದ್ದು ರಾಜ್ಯದ ಹಲವಾರು ನದಿ ಹಳ್ಳ ಕೊಳ್ಳಗಳು ತುಂಬಿ ಭೋರ್ಗರೆಯುತ್ತಿದ್ದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ನಡುವೆ ರಾಜ್ಯದ 16 ಜಿಲ್ಲೆಗಳು ಪ್ರವಾಹ ಭೀತಿಯನ್ನು ಎದುರಿಸುತ್ತಿದ್ದು ಹಲವಾರು ನದಿಗಳು ತುಂಬಿ ಪ್ರವಾಹವನ್ನು ಸೃಷ್ಠಿ ಮಾಡಿದೆ. ಈ ಹಿನ್ನಲೆಯಲ್ಲಿ ಇದೀಗ ಕಾವೇರಿ ಜಲಾಶಯ ಪ್ರದೇಶದ ನದಿಗಳಾದ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ಪಾತ್ರದಲ್ಲೂ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಅಲ್ಲದೇ ಜಲಾಶಯದ ಮಟ್ಟ 100 ಅಡಿಗಳನ್ನು ದಾಟಿದ್ದು, ಹೀಗಾಗಿ ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರ ವಹಿಸುವಂತೆ ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos