ಬೆಂಗಳೂರು, ಆ.19 : ತಮಿಳುನಾಡು ಭಾಗದಲ್ಲಿ ಉಂಟಾಗಿದ್ದ ಮೇಲ್ಮೈಸುಳಿಗಾಳಿ ಪ್ರಭಾವದಿಂದ ದಕ್ಷಿಣ ಕರ್ನಾಟಕ ಹಾಗೂ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿ ಹಲವಡೆ ಭಾರೀ ಮಳೆಯಾಗುತ್ತಿದೆ. 24 ಗಂಟೆಗಳಲ್ಲಿ ದಕ್ಷಿಣ ಕರ್ನಾಟಕದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ 65 ಮಿ.ಮೀ ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ದಕ್ಷಿಣ ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಉತ್ತರ ಒಳನಾಡು, ಕರಾವಳಿ ಹಾಗೂ ಮಳೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗಲಿದೆ. ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.