ಬೇಗ್ ಕುಟುಂಬದ ವಿರುದ್ಧ ಸಮನ್ಸ್ ಜಾರಿ

ಬೇಗ್ ಕುಟುಂಬದ ವಿರುದ್ಧ ಸಮನ್ಸ್ ಜಾರಿ

ಬೆಂಗಳೂರು, ಆ. 19 : ಐಎಂಎ ಹಗರಣಕ್ಕೆ ಸಂಬಂಧಿದಸಿದಮತೆ ಶಿವಾಜಿನಗರ ಕ್ಷೇತ್ರದ ಅನರ್ಹ ಶಾಸಕ ರೋಷನ್ ಬೇಗ್ ಕುಟುಂಬದವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ 10 ಮಂದಿ ಪ್ರತಿವಾದಿಗಳಿಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದೆ.
ನಫೀಸಾ ಖಾನ್ ಸೇರಿ 10 ಮಂದಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಐಎಂಎ ವಂಚನೆ ಪ್ರಕರಣಕ್ಕೆ ಶಿವಾಜಿನಗರದ ಶಾಸಕ ರೋಷನ್ ಬೇಗ್ ಕೂಡ ಆರೋಪಿ ಸ್ಥಾನದಲ್ಲಿದ್ದಾರೆ. ಕಿಂಗ್ ಪಿನ್ ಮನ್ಸೂರ್ ಖಾನ್ ರೋಷನ್ ಬೇಗ್ ಅವರಿಗೆ 400 ಕೋಟಿ ರೂ. ನೀಡಿದ್ದೆ ಎಂದು ಹೇಳಿಕೆ ನೀಡಿದ್ದ. ಹೀಗಾಗಿ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹಸ್ತಕ್ಷೇಪದ ಕುರಿತು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಸುದ್ದಿ ಹರಿದಾಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos