ಬೆಂಗಳೂರು, ಆ. 19 : ಮಂಗಳವಾರ ಬೆಳಿಗ್ಗೆ ಬಿಜೆಪಿಯ 15 ಶಾಸಕರು ಹಾಗೂ ಒಬ್ಬ ಪಕ್ಷೇತ್ತರ ಸೇರಿ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ವಿಧಾನಸೌಧ ಮುಂಭಾಗದಲ್ಲೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 22 ದಿನಗಳ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಚಿವ ಸಂಪುಟ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ.