ಬೆಂಗಳೂರು , ಆ. 25 : ಜನಸೇವೆ ಮಾಡುವ ಮಂತ್ರಿ ಗಳಿಗೆ ಜನಪರ ಕಾಳಜಿಗಿಂತ ಸರ್ಕಾರದಿಂದ ಸಿಗುವ ಸೌಲತ್ತಗಳನ್ನು ಹೇಗೆಲ್ಲಾ ಬಳಕೆ ಮಾಡಿಕೊಳ್ಳಬೇಕೆಂದು ಪ್ಲ್ಯಾನ್ ಮಾಡುವವರೇ ಹೆಚ್ಚು. ಇದಕ್ಕೆ ಸ್ಪಪ್ಟ ಉದಾಹರಣೆ ಅಂದ್ರೆ ಹೊಸದಾಗಿ ಮುಂತ್ರಿ ಸ್ಥಾನ ವಹಿಸಿಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರದ 17 ನೂತನ ಸಚಿವರು ಎಂದರೆ ತಪ್ಪಾಗುವುದಿಲ್ಲ.
ರಾಜ್ಯದಲ್ಲಿ ಪ್ರವಾಹದ ಭೀಕರತೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅರ್ಧ ಜನರ ಬದುಕು ಪ್ರವಾಹದಿಂದ ಬೀದಿಗೆ ಬಂದಿದೆ. ಇತ್ತ ಕೇಂದ್ರದಿಂದ ರಾಜ್ಯಕ್ಕೆ ಬಿಡಿಗಾಸು ಪರಿಹಾರ ಸಿಕ್ಕಿಲ್ಲ. ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದ ಹೊಸ ಸಚಿವರಿಗೆ ಓಡಾಡೋಕೆ ಮಾತ್ರ ದುಬಾರಿ ಕಾರು ಬೇಕಂತೆ. ಸದ್ಯ 15 ಲಕ್ಷದಿಂದ 23 ಲಕ್ಷದ ಇನ್ನೋವಾ ಕಾರನ್ನು ನೂತನ ಸಚಿವರುಗಳಿಗೆ ನೀಡಲಾಗಿದ್ದು, ಇದರಲ್ಲಿ ಓಡಾಡೋಕೆ ಆಗಲ್ಲ 40-45 ಲಕ್ಷದ ಫಾರ್ಚೂನರ್ ಕಾರೇ ಬೇಕು ಎಂದು ಸಚಿವರು ಕೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.