ಬೆಂಗಳೂರು, ಆ. 25 : ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಗೆ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಿಹಾರ ಮೂಲದ ಮುಖೇಶ್ ಕುಮಾರ್(34) ಬಂಧಿತ. 8 ವರ್ಷಗಳ ಹಿಂದೆ ಹೆಣ್ಣೂರು ಸಮೀಪ ‘ಫ್ಯೂಚರ್ ಎಜ್ಯುಕೇಷನ್’ ಕನ್ಸಲ್ಟೆನ್ಸಿ ಕಚೇರಿ ತೆರೆದಿದ್ದ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರ ಪರಿಚಯವಿದ್ದು, ಮೆಡಿಕಲ್ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಗೆ ನಂಬಿಸಿ ಲಕ್ಷಾಂತರ ರೂ. ಪಡೆದು ವಂಚನೆ ಮಾಡುತ್ತಿದ್ದ.
ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದು ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮೋಸ ಮಾಡುತ್ತಿದ್ದ. ಈ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಶನಿವಾರ ಕಚೇರಿ ಮೇಲೆ ನಡೆಸಿ ಮುಖೇಶ್ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪ್ರಭಾತ್, ಲೋಹಿತ್ ಎಂಬುವರು ತಪ್ಪಿಸಿಕೊಂಡಿದ್ದು, ಪತ್ತೆ ಕಾರ್ಯಾಚರಣೆ ಮುಂದುವರೆದಿದೆ.