ಬೆಂಗಳೂರು, ಆ. 26 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಇಬ್ಬರನ್ನು ಸಂಪುಟಕ್ಕೆ ತೆಗೆದುಕೊಳ್ಳಲಿದ್ದಾರೆ. ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೆಳಗಾವಿ ಜಿಲ್ಲೆಯ ಉಮೇಶ್ಕತ್ತಿ ನಾಳೆ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ನಾಳೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲಿಂಬಾವಳಿ ಮತ್ತು ಉಮೇಶ್ ಕತ್ತಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪನವರ ಸಂಪುಟಕ್ಕೆ 19 ಮಂದಿ ಸಚಿವರು ಸೇರ್ಪಡೆಯಾದಂತಾಗಲಿದೆ. ಉಮೇಶ್ ಕತ್ತಿಯನ್ನು ಸಂಪುಟದಿಂದ ದೂರ ಇಟ್ಟರೆ ಸರ್ಕಾರಕ್ಕೆ ಕಂಟಕ ತಪ್ಪಿದ್ದಲ್ಲ. ಅವರನ್ನು ಕಡೆಗಣಿಸಿದರೆ ಸಮ್ಮಿಶ್ರಸರ್ಕಾರಕ್ಕೆ ಉಂಟಾದ ಗತಿಯೇ ನಮಗೂ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಉಮೇಶ್ ಕತ್ತಿ ಮತ್ತು ಅರವಿಂದಲಿಂಬಾವಳಿಯವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಹಸಿರು ನಿಶಾನೆ ತೋರಿದ್ದಾರೆ. ನಾಳೆ ರಾಜಭವನಕ್ಕೆ ಆಗಮಿಸುವಂತೆ ಸೂಚನೆ ಕೊಟ್ಟಿದ್ದಾರೆ. ಕಳೆದ ಮಂಗಳವಾರ ಸಚಿವ ಸಂಪುಟ ರಚನೆ ಬಳಿಕ ಕತ್ತಿಯನ್ನು ಸಂಪುಟದಿಂದ ದೂರ ಇಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಪಕ್ಷವನ್ನೇ ತೊರೆಯುವ ತೀರ್ಮಾನಕ್ಕೆ ಬಂದಿದ್ದರು.