ಅವಕಾಶ ತಾನಾಗೇ ಬರುತ್ತೇ : ಡಿಕೆಶಿ

ಅವಕಾಶ ತಾನಾಗೇ ಬರುತ್ತೇ : ಡಿಕೆಶಿ

ಬೆಂಗಳೂರು, ಆ. 29 : ಸಮಯ ಬಂದಾಗ ಅವಕಾಶಗಳು ತಾವಾಗಿಯೇ ಹುಡುಕಿಕಂಡು ಬರುತ್ತವೆ.  ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದರು.
ಸದಾಶಿವ ನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣೆಬರಹದಲ್ಲಿ ಬರೆದಿದ್ದರೆ ಎಲ್ಲವೂ ತಾನಾಗೇ ಹುಡಿಕಿಕೊಂಡು ಬರುತ್ತದೆ. ‘ನಾನು ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕೆಂದು ನನ್ನ ಹಣೆಬರಹದಲ್ಲಿ ಬರೆದಿದ್ದರೆ ಸಮಯ ಬಂದಾಗ ಅವಕಾಶ ತಾನಾಗೇ ಹುಡುಕಿಕೊಂಡು ಬರುತ್ತದೆ. ಅದನ್ನು ಯಾರಿಂದಲೂ ತಪ್ಪಿಸಲಾಗಲ್ಲ. ಹಣೆಬರಹ, ಅದೃಷ್ಟದ ಮೇಲೆ ನನಗೆ ನಂಬಿಕೆ ಇದೆ.’ ಹೀಗೆ ಹೇಳುವ ಮೂಲಕ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ತಾವು ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಲಾಬಿ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos