ಬೆಂಗಳೂರು, ಸೆ. 5: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಒಂಟಿ ಮಹಿಳೆಯರ ಮೇಲೆ ಕೊಲೆ, ಸುಲಿಗೆ, ದರೋಡೆಗಳು ಹೆಚ್ಚಗಿ ನಡೆಯುತ್ತಿವೆ ಹೌದು, ಇಂದು ಸುಂಕದಕಟ್ಟೆಯ ಶ್ರೀನಿವಾಸ ನಗರದಲ್ಲಿ ಅಪರಿಚಿತ ಮಹಿಳೆ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ. ಅಪರಿಚಿತ ವ್ಯಕ್ತಿಯು ಮಹಿಳೆಯನ್ನು ಮಚ್ಚಿನಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಈ ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆಯನ್ನ ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.