ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಡುವೆಯೇ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಗೈರು ಹಾಜರಾಗಿದ್ದಾರೆ.
ಬಂಡಾಯದ ಬಾವುಟ ಹಾರಿಸಿರುವ ರಮೇಶ್ ಜಾರಕಿಹೊಳಿ, ಡಾ.ಉಮೇಶ್ ಜಾದವ್, ಉಮೇಶ್ ಕುಮಠಳ್ಳಿ, ಬಿ.ನಾಗೇಂದ್ರ ಗೈರು ಹಾಜರಾಗಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದರೆ ಕಾನೂನುರೀತ್ಯ ಕ್ರಮ ಕೈಗೊಳ್ಳಲಾಗುವುದು, ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದರೆ ಎಂದು ಭಾವಿಸಲಾಗುವುದು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲರಿಗೂ ಪತ್ರ ಬರೆದಿದ್ದರು. ಇದನ್ನು ಮೀರಿಯೂ ನಾಲ್ವರು ಸಭೆಗೆ ಗೈರು ಹಾಜರಾಗಿದ್ದು, ಕಾಂಗ್ರೆಸ್-ಜೆಡಿಎಸ್ ತಳಮಳ ಶುರುವಾಗಿದೆ.