ಕೆ.ಕೆ ನಲ್ಲಿ ವರುಣನ ಅಬ್ಬರ : ಇಬ್ಬರು ಸಾವು

ಕೆ.ಕೆ ನಲ್ಲಿ ವರುಣನ ಅಬ್ಬರ : ಇಬ್ಬರು ಸಾವು

ಬೆಂಗಳೂರು, ಸೆ. 25 : ಕಲ್ಯಾಣ ಕರ್ನಾಟಕದಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಲ್ಯಾಣ ಕರ್ನಾಟಕದ ಐದು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಸಾಲಹಳ್ಳಿಗ್ರಾಮದ ಸಂಗೀತಾ(16), ಬಳ್ಳಾರಿ ಜಿಲ್ಲೆ ಹೊಸವಪೇಟೆ ತಾಲೂಕಿನ ಹನುಮನಹಳ್ಳಿಯ ಎಚ್. ದ್ಯಾವಪ್ಪ(77) ಎಂಬವರು ಮೃತ ದುರ್ದೈವಿಗಳು. ಸಿರಗುಪ್ಪ ತಾಲೂಕಿನ ಭೈರಾಪುರದಲ್ಲಿ ಮನೆ ಕುಸಿದ ಪರಿಣಾಮ ಹನುಮಂತಗೌಡ(60) ಗಂಭೀರ ಗಾಯಗೊಂಡಿದ್ದಾರೆ. ಹೊಸಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ಲೆಕ್ಕಿಸದೆ ಅತಿವೇಗದಲ್ಲಿ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹಿನ್ನಲೆ ಚಾಲಕ ಸೇರಿ ಮೂವರು ಗಾಯಗೊಂಡಿದ್ದು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos