ಕೆಜಿಗೆ ರೂ. 30ಕ್ಕೆ ಕುಸಿದ ಈರುಳ್ಳಿ

ಕೆಜಿಗೆ ರೂ. 30ಕ್ಕೆ ಕುಸಿದ ಈರುಳ್ಳಿ

ನವದೆಹಲಿ, ಅ.  3 : ಏಷ್ಯಾದ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಸಲ್ಗಾಂವ್ ನಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ರೂ.30ಕ್ಕೆ ಇಳಿಕೆಯಾಗಿದೆ.
ಸೆ. ಪ್ರತಿ ಕೆಜಿ ಈರುಳ್ಳಿಯ ಬೆಲೆ ರೂ.51 ಇತ್ತು. ಇದೀಗ ಈರುಳ್ಳಿ ಬೆಲೆಯಲ್ಲಿ ಕುಸಿತ ಕಂಡು ಬಂದ ಹಿನ್ನಲೆ ಗ್ರಾಹಕರ ಮುಖದಲ್ಲಿ ಸಂತಸ ಕಂಡು ಬಂದಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇತ್ತೀಚೆಗೆ ಎದುರಾದ ಪ್ರವಾಹ ಪರಿಸ್ಥಿತಿಯಿಂದಾಗಿ ಈರುಳ್ಳಿ ಪೂರೈಕೆಯಲ್ಲಿ ಅಡಚಣೆಯುಂಟಾಗಿತ್ತು. ಕೇಂದ್ರ ಸರ್ಕಾರ ಕಳೆದ ಭಾನುವಾರ ಈರುಳ್ಳಿ ರಫ್ತು ನಿಷೇಧಿಸಿತ್ತು. ಜೊತೆಗೆ ಮಿತಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos