ಬೆಂಗಳೂರು, ಅ. 6 : ಬಾಗಲಕೋಟೆ ದಾವಣಗೆರೆ ಹಾಗೂ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆಯಾಗಿದ್ದು, ಕೆಲವೆಡೆ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿದ ಮಳೆಗೆ ನೆನೆದು ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಗ ಸೇರಿ ವೃದ್ಧ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಕಿರಸೂರು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಈರಪ್ಪ ಹಡಪದ (60), ಗೌರವ್ವ ಹಡಪದ(52) ಹಾಗೂ ಮಗ ಮಗ ನಿಂಗಪ್ಪ ಹಡಪದ(35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಿಂಗಪ್ಪನ ಪತ್ನಿ ಸವಿತಾ ಹಾಗೂ ಮಗಳು ತನು ಅಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮನೆ ಕುಸಿದು ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದ ರೋಧನ ಮುಗಿಲು ಮುಟ್ಟಿದೆ. ಶವಗಳು ಮನೆಯ ಅವಶೇಷಗಳಡಿ ಸಿಲುಕಿದ ಪರಿಣಾಮ ಅಗ್ನಿಶಾಮಕ ದಳ ಹಾಗೂ ಬಾಗಲಕೋಟೆ ಗ್ರಾಮೀಣ ಪೊಲೀಸರು ಹಾಗೂ ಸ್ಥಳೀಯರ ಸಹಾಯದಿಂದ ಶವಗಳ ಶೋಧಕಾರ್ಯ ಮುಂದುವರಿದಿದೆ