ಬೆಂಗಳೂರು, ಅ. 9: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಅನರ್ಹ ಶಾಸಕರಿಗೆ ಸಿಹಿಸುದ್ದಿ ನೀಡಿದ್ದು, ಉಪಚುನಾವಣೆಯಲ್ಲಿ ಸ್ಪರ್ಥಿಸಲು ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ.
ಭಾನುವಾರ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾದ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಸಂಬಂಧ ಚರ್ಚೆ ನಡೆಸಿದ್ದು, ಬಿ.ಎಲ್.ಸಂತೋಷ್ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುತ್ತೇವೆ. ಈ ಬಗ್ಗೆ ಸಂದೇಹ ಬೇಡ ಎಂಬುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.