ಬಿಜೆಪಿ ಸರ್ಕಾರ ಮಾಡುತ್ತಿದೆ: ಎಲ್ ಎನ್ ನಾರಾಯಣಸ್ವಾಮಿ

ಬಿಜೆಪಿ ಸರ್ಕಾರ ಮಾಡುತ್ತಿದೆ: ಎಲ್ ಎನ್ ನಾರಾಯಣಸ್ವಾಮಿ

ದೇವನಹಳ್ಳಿ, ಅ. 11: ಮೈತ್ರಿ ಸರ್ಕಾರದಲ್ಲಿ ತಾಲೂಕಿಗೆ ಸುಮಾರು 150 ಕೋಟಿ ರೂ ಗಳ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ಕ್ಷೇತ್ರದ ಅನುದಾನವನ್ನು ಕಡಿತಗೊಳಿಸಿ ತಾರತಮ್ಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಎಲ್ ಎನ್ ನಾರಾಯಣಸ್ವಾಮಿ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಜೆಡಿಎಸ್ ಮುಖಂಡರ ಜೊತೆ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನೆರೆ ಸಂತ್ರಸ್ಥರಿಗೆ ಸೂಕ್ತ ಪ್ರಮಾಣದಲ್ಲಿ ಪರಿಹಾರ ಒದಗಿಸದ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರದ ಅನುದಾನವನ್ನ ಕಡಿತ ಗೊಳಿಸಿ ತಾರತಮ್ಯ ತೋರುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ತೆರಳುವ ಮುನ್ನಾ ಮಾತನಾಡಿದರು.

ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗಿತ್ತು, ಆ ಅನುದಾನವನ್ನು ಬಿಜೆಪಿ ಸರ್ಕಾರ ಬಂದ ಮೇಲೆ ಅದನ್ನು ತಡೆ ಹಿಡಿದಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಕೂಡಲೇ ಕಡಿತ ಗೊಂಡಿರುವ ಅನುದಾನವನ್ನು ನೀಡಬೇಕು. ವಿಧಾನ ಸೌಧದ ಕಲಾಪದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬರ ಆವರಿಸಿ ಜನ ಜಾನುವಾರುಗಳು ಬರದಿಂದ ತತ್ತರಿಸಿದ್ದರೂ ಸಮರ್ಪಕ ಅನುದಾನ ಬಿಡುಗಡೆ ಮಾಡದೆ ತಾರತಮ್ಯ ಮಾಡುತ್ತಿದ್ದಾರೆ. ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಬಿಜೆಪಿ ಯಾವ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ನೈಸರ್ಗಿಕ ವಿಕೋಪವಾದ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿ ಗಮನಿಸಿ ಕೇಂದ್ರ ಸರ್ಕಾರ ಅನುದಾನ ನೀಡಬೇಕು. ಕರ್ನಾಟಕದ ವಿಷಯದಲ್ಲಿ  ಕೇಂದ್ರ ಸರ್ಕಾರ ಮಲತಾಯಿ ದೋರಣೆ ಅನುಸರಿಸುತ್ತಿದೆ. ನೆರೆ ಸಂತ್ರಸ್ಥರಿಗೆ ಸೂಕ್ತ ಪ್ರಮಾಣದಲ್ಲಿ ಪರಿಹಾರ ಒದಗಿಸದ ಕಾರಣ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ , ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರ ಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರ ಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ಸರ್ಕಲ್ ನಿಂದ ಪತಿಭಟನೆ ನಡೆಸಲಾಗುತ್ತಿದೆ. ತಾಲೂಕಿನಿಂದ ಮುಖಂಡರು ಮತ್ತು ಕಾರ್ಯಕರ್ತರು ಪತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಈ ವೇಳೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಬಿ ಶ್ರೀನಿವಾಸ್, ಕಾರ್ಯಾಧ್ಯಕ್ಷ ಆರ್ ಮುನೇಗೌಡ, ಎಪಿ ಎಮ್ ಸಿ ಅಧ್ಯಕ್ಷ ಕೆ.ವಿ ಮಂಜುನಾಥ್, ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷ ಗುರಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ , ಹಾಪ್ ಕಾಮ್ಸ್ ನಿರ್ದೇಶಕ ಶ್ರೀನಿವಾಸ್, ವಿಜಯಪುರ ಹೋಬಳಿ ಅಧ್ಯಕ್ಷ ವೀರಪ್ಪ, ಚನ್ನರಾಯ ಪಟ್ಟಣ ಹೋಬಳಿ ಅಧ್ಯಕ್ಷ  ಮುನಿರಾಜು, ಕಸಬ ಹೋಬಳಿ ಅಧ್ಯಕ್ಷ ಚಿಕ್ಕ ನಾರಾಯಣಸ್ವಾಮಿ , ತಾಪಂ ಸದಸ್ಯ ಭೀಮರಾಜ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಮುನಿರಾಜು, ಮುಖಂಡರಾದ ಸುಬ್ಬಣ್ಣ, ಮಾರೇಗೌಡ, ಆರ್ ಕೆ ನಂಜೇಗೌಡ, ಕಲ್ಯಾಣ್ ಕುಮಾರ್ ಬಾಬು, ರಬ್ಬನಹಳ್ಳಿ ಪ್ರಭಾಕರ್, ಶಿವಾನಂದ್ ಇದ್ದರು.

 

 

ಫ್ರೆಶ್ ನ್ಯೂಸ್

Latest Posts

Featured Videos