ಚಿಕ್ಕಮಗಳೂರು, ಅ.13 : ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಶೋಭಾಯಾತ್ರೆಗೆ ದತ್ರಾತ್ರೇಯರ ಶಿಲಾ ವಿಗ್ರಹ ತರಲು ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆ ದತ್ತಮಾಲಾದಾರಿಗಳಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುಥಾಲಿಕ್, ಕಾಶ್ಮೀರಿ ಪಂಡಿತ್ ರಾಹುಲ್ ಕೌಲ್, ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಕಾಳಿ ಸ್ವಾಮೀಜಿ ಮತ್ತು ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನಗರದ ಬಸವನಹಳ್ಳಿ ಮುಖ್ಯರಸ್ತೆಯ ಶಂಕರಮಠದ ಎದುರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಗುತ್ತಿದೆ.