ಉತ್ತರಾಖಂಡ, ಅ.15 : ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಹಿನ್ನಲೆ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಐವರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಆದರೆ ಮೃತರ ಬಗ್ಗೆ ಮತ್ಯಾವುದೇ ಮಾಹಿತಿ ಇನ್ನೂ ಸಹ ಪೊಲೀಸರಿಂದ ದೊರೆತಿಲ್ಲ. ಎಸ್ಡಿಆರ್ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ನೈನ್ಬಾಗ್ ಸೇತುವೆ ಬಳಿ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.