ನವದೆಹಲಿ, ಅ. 15 : ಕರ್ನಾಟಕ, ಕೇರಳ ಹಾಗೂ ಮಾಹೆಯ ವಿವಿಧ ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ನೀಡಿದೆ.
ಇದರೊಂದಿಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿಯೂ ಇಂದು ಇಡೀ ದಿನ ಮಳೆಯಾಗಲಿದೆ. ಛತ್ತೀಸ್ಗಢ, ಒಡಿಶಾ, ಮೇಘಾಲಯ, ನಾಗಾಲ್ಯಾಂಡ್, ಅಸ್ಸಾಂ, ಮಣಿಪುರ ಮತ್ತು ಮಿಜೋರಾಂನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ.