ಬೆಂಗಳೂರು, ಅ. 19 : ದುಬೈನಲ್ಲಿ ವಾಸವಾಗಿರುವ ಅದಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಭಾಜನರಾಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕನ್ನಡಿಗರು, ದುಬೈ ಸಂಘದ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಕರ್ನಾಟಕದ ನಾಡಹಬ್ಬ 64ನೆ ಕನ್ನಡ ರಾಜ್ಯೋತ್ಸವವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನ.8ರಂದು ಆಚರಿಸುತ್ತಿದ್ದು, ಇದು 16ನೆ ದುಬೈ ಕನ್ನಡ ರಾಜ್ಯೋತ್ಸವವಾಗಿದೆ.
ಈ ಬಾರಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.