ಕಾಬೂಲ್ ನಲ್ಲಿ ಬಾಂಬ್ ಸ್ಫೋಟ್

ಕಾಬೂಲ್ ನಲ್ಲಿ ಬಾಂಬ್ ಸ್ಫೋಟ್

ಕಾಬೂಲ್, ಅ. 19 : ಪ್ರಾರ್ಥನೆ ವೇಳೆ ಪೂರ್ವ ಅಫ್ಘಾನಿಸ್ಥಾನದ ಮಸೀದಿಯೊಂದರ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದು, ಪರಿಣಾಮ 62 ಮಂದಿ ಮೃತಪಟ್ಟು, 36 ಮಂದಿ ಗಾಯಗೊಂಡಿದ್ದಾರೆ.
ಹಸ್ಕ ಮೈನಾ ಎಂಬ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆತ್ಮಾ ಹುತಿ ದಾಳಿಯೋ ಅಥವಾ ಬೇರೆ ರೀತಿಯ ದಾಳಿಯೋ ಎಂಬುದು ಇನ್ನೂ ಗೊತ್ತಾಗಿಲ್ಲ. ಸ್ಫೋಟದ ತೀವ್ರತೆಗೆ ಮಸೀದಿಯ ಚಾವಣಿ ಕುಸಿದಿದ್ದರಿಂದ ಭಾರಿ ಪ್ರಮಾಣದಲ್ಲಿ ಜೀವ ಹಾನಿಯಾಗಿದೆ ಎಂದು ಪ್ರಾಂತ್ಯದ ಗವರ್ನರ್ ತಿಳಿಸಿದ್ದಾರೆ.
ಆಫ್ಘನ್ನಲ್ಲಿ ಹಿಂಸಾಚಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದ್ದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸದ್ಯ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos