ಸುಭಾಷ್‌ಚಂದ್ರ ಬೋಸ್ ಅವರ ಪ್ರತಿಮೆ ಅನಾವರಣ
ಬೆಂಗಳೂರು: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧ ಪಶ್ಚಿಮ ದ್ವಾರ ಬಳಿ ಅವರ ಪ್ರತಿಮೆಯನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು. ಇದೇ ವೇಳೆ ಪ್ರತಿಜ್ಞೆ ಭೋದನೆ ಮಾಡಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ದೇಶದ ಹೋರಾಟಕ್ಕೆ ಗಾಂಧಿ ಅವರು ಅಹಿಂಸಾ ಮಾರ್ಗ ಅನುಸರಿಸಿದರೆ, ನೇತಾಜಿ ಅವರು ತಮ್ಮದೇ ಹಾದಿಯಲ್ಲಿ ಹೋರಾಡಿದರು. ಬ್ರಿಟಿಷರ ಸಂಕೋಲೆಯಿಂದ ಬಿಡಿಸಿ ಸ್ವಾತಂತ್ರ್ಯ ತಂದು ಕೊಡುವಲ್ಲಿ ಇವರ ಹೋರಾಟ ದೊಡ್ಡದು. ಅಂದಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಸ್ವಾಮಿ ವಿವೇಕಾನಂದ ಆಶಯಂತೆ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡಿದ್ದರು.
ಅವರು ಇನ್ನೂ ಹೆಚ್ಚು ಕಾಲ ಬದುಕಿದ್ದರೆ ಭಾರತ ಬೇರೊಂದು ಇತಿಹಾಸ ನಿರ್ಮಿಸುತ್ತಿತ್ತು. ಅವರ ಸಾವಿನ ಬಗ್ಗೆ ಅನೇಕ ಗೊಂದಲಗಳಿದ್ದು, ಯಾವುದಕ್ಕು ಸ್ಪಷ್ಟತೆ ಸಿಕ್ಕಿಲ್ಲ. ಆದರೆ ಇವರ ಹೋರಾಟಕ್ಕೆ ನಾವೆಲ್ಲರು ಗೌರವ ಸಮರ್ಪಿಸಬೇಕು ಎಂದರು.