ಹನೂರು,ಅ. 21 : ಸುಮಾರು 15 ಅಡಿ ಉದ್ದವಿರುವ ಬೃಹತ್ ಹೆಬ್ಬಾವು ಪ್ರತ್ಯಕ್ಷಗೊಂಡಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕಂಡು ಭಯಭೀತರಾಗಿದ್ದಾರೆ.
ತಾಲೂಕಿನ ಮುತ್ತಶೆಟ್ಟಿಯೂರು ಗ್ರಾಮದ ಕಾಡಂಚಿನ ಜಮೀನೊಂದರ ಮರದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದಾರೆ. ಹಾವಿನ ಗಾತ್ರ ನೋಡಿದರೆ ಇನ್ನು ಈ ಪ್ರದೇಶದಲ್ಲಿ ಹಲವಾರು ಹೆಬ್ಬಾವುಗಳಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ರೈತರು ಹಾಗೂ ವೃದ್ಧರು, ಮಕ್ಕಳು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಕೂಡಲೇ ಹಾವನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.