ನ್ಯೂಝಿಲೆಂಡ್ ವಿರುದ್ಧ ಮೊದಲ ಏಕದಿನ: ಭಾರತಕ್ಕೆ ಭರ್ಜರಿ ಜಯ

ನ್ಯೂಝಿಲೆಂಡ್ ವಿರುದ್ಧ ಮೊದಲ ಏಕದಿನ: ಭಾರತಕ್ಕೆ ಭರ್ಜರಿ ಜಯ

ನೇಪಿಯರ್: ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿರುವ ಭಾರತ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಝಿಲೆಂಡ್ ತಂಡ ಮುಹಮ್ಮದ್ ಶಮಿ(3-19)ನೇತೃತ್ವದ ಭಾರತದ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್‌ಗೆ ನಿರುತ್ತರವಾಗಿ 38 ಓವರ್‌ಗಳಲ್ಲಿ ಕೇವಲ 157 ರನ್‌ಗೆ ಆಲೌಟಾಯಿತು. ನಾಯಕ ಕೇನ್ ವಿಲಿಯಮ್ಸನ್(64)ಸರ್ವಾಧಿಕ ಸ್ಕೋರ್ ಗಳಿಸಿದರು.

ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ 49 ಓವರ್‌ಗಳಲ್ಲಿ ಗೆಲ್ಲಲು 156 ರನ್ ಪರಿಷ್ಕೃತ ಸವಾಲನ್ನು ಪಡೆದ ಭಾರತ 34.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಸೇರಿತು. ಆರಂಭಿಕ ಆಟಗಾರ ಶಿಖರ್ ಧವನ್(ಔಟಾಗದೆ 75,103
ಎಸೆತ, 6 ಬೌಂಡರಿ) ಹಾಗೂ ನಾಯಕ ವಿರಾಟ್ ಕೊಹ್ಲಿ(45, 59 ಎಸೆತ, 3 ಬೌಂಡರಿ)2ನೇ ವಿಕೆಟ್‌ಗೆ 91 ರನ್ ಜೊತೆಯಾಟ ನಡೆಸಿ ಇನ್ನೂ 85 ಎಸೆತಗಳು ಬಾಕಿ ಇರುವಾಗಲೇ ಗೆಲುವು ತಂದುಕೊಟ್ಟರು.

19 ರನ್‌ಗೆ ಪ್ರಮುಖ 3 ವಿಕೆಟ್‌ಗಳನ್ನು ಪಡೆದ ವೇಗಿ ಮುಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಫ್ರೆಶ್ ನ್ಯೂಸ್

Latest Posts

Featured Videos