ಮಂಗಳೂರು, ಅ. 26 : ಪ್ರೇಮ ವೈಫಲ್ಯದಿಂದ ನೊಂದ ನರ್ಸಿಂಗ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಮಂಗಳೂರಿನ ಪಿಜಿ ಕೊಠಡಿಯಲ್ಲಿ ನಡೆದಿದೆ.
ಕೇರಳ ಮೂಲದ ಅನುಪಮಾ (23) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಮಂಗಳೂರಿನ ಅತ್ತಾವರದ ಪಿಜಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.