ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಬೇಡ: ಡಿ.ಕೆ.ಸುರೇಶ್

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಬೇಡ: ಡಿ.ಕೆ.ಸುರೇಶ್

ನವದೆಹಲಿ, ಅ. 30: ವೈದ್ಯಕೀಯ ಕಾಲೇಜು ಸ್ಥಳಾಂತರ ಮಾಡಲು ಅವಕಾಶ ಕೊಡಲ್ಲ. ಚಿಕ್ಕಬಳ್ಳಾಪುರ ಕ್ಕೆ ಮೆಡಿಕಲ್ ಕಾಲೇಜು ನೀಡಲು ನಮ್ಮ ಅಭ್ಯಂತರವಿಲ್ಲ. ಆದರೆ‌ ರಾಜಕೀಯ ಕಾರಣಕ್ಕಾಗಿ ಕನಕಪುರಕ್ಕೆ ಅನ್ಯಾಯ ಮಾಡಿದರೆ‌ ಸುಮ್ಮನೆ ಕೂರುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಕನಕಪುರ ವೈದ್ಯಕೀಯ ಕಾಲೇಜಿನ ಕೆಲಸ ಆರಂಭವಾಗುವ ಸಂದರ್ಭದಲ್ಲಿ ಸ್ಥಳಾಂತರ ಮಾಡುವುದು ಸರಿಯಲ್ಲ. ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡುವುದು ಬೇಡ ಈ ಬಗ್ಗೆ ಸಿಎಂಗೆ ಪತ್ರ ಬರೆದಿದ್ದು, ಸೂಕ್ತ ಕ್ರಮ ಜರುಗಿಸಲು ಮನವಿ ಮಾಡಿದ್ದೇನೆ ಎಂದು‌ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos