ಬೆಂಗಳೂರು, ನ. 1 : “ನನ್ನ ಮತ್ತು ಡಿಕೆಶಿ ನಡುವೆ ಅಭಿಪ್ರಾಯಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, “ನನ್ನ ಮತ್ತು ಡಿಕೆಶಿ ನಡುವೆ ಅಭಿಪ್ರಾಯ ಭೇದ ಇರಬಹುದು. ಆದರೆ, ಭಿನ್ನಾಭಿಪ್ರಾಯ ಇಲ್ಲ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವುದೇ ಭಿನ್ನಾಭಿಪ್ರಾಯಗಳು ನಮ್ಮ ನಡುವೆ ಇಲ್ಲ. ಹೀಗಾಗಿ ನಾವಿಬ್ಬರೂ ಒಟ್ಟಾಗಿಯೇ ಪಕ್ಷದ ಏಳಿಗೆಗಾಗಿ ಶ್ರಮಿಸಲಿದ್ದೇವೆ” ಎಂದು ತಿಳಿಸಿದ್ದಾರೆ. ಉಪ ಚುನಾವಣೆಯಲ್ಲಿ ಇಬ್ಬರೂ ಒಂದಾಗಿ ಅನರ್ಹ ಶಾಸಕರ ಸೋಲಿಗೆ ಶ್ರಮಿಸುವುದಾಗಿ ಪರೋಕ್ಷ ಮಾಹಿತಿಯನ್ನು ರವಾನಿಸಿದ್ದಾರೆ. ಅನರ್ಹ ಶಾಸಕರ ಆತಂಕಕ್ಕೆ ಕಾರಣರಾಗಿದ್ದಾರೆ.