ಬೆಂಗಳೂರು: ದಕ್ಷಿಣ ವಿಭಾಗದ ಪೊಲೀಸರು ರಾತ್ರೋ ರಾತ್ರಿ ರೌಡಿ ಶೀಟರ್ ಮನೆಗಳ ಮೇಲೆ ದಾಳಿ ನಡೆಸಿ,
ರೌಡಿಗಳ ಚಳಿ ಬಿಡಿಸಿದ್ದಾರೆ.
ಡಿಸಿಪಿ ಅಣ್ಣಾಮಲೈ ಹಾಗೂ ಎಸಿಪಿ ಮಹೇದೇವ್ ನೇತೃತ್ವದ ತಂಡವು ದಾಳಿ ನೇತೃತ್ವ ವಹಿಸಿದ್ದು, 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆ ಮೇಲೆ ಧಿಡೀರ್ ದಾಳಿ ನಡೆಸಿದ್ದಾರೆ.
ಕೋಣನಕುಂಟೆ, ಕುಮಾರಸ್ವಾಮಿ ಲೇಔಟ್, ಸುಬ್ರಮಣ್ಯಪುರ , ತಲಘಟ್ಟಪುರ, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಒಟ್ಟು 32 ರೌಡಿಶೀಟರ್ ಗಳು ಹಾಗೂ 44 MOB ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ 71 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಅನಧಿಕೃತವಾಗಿ ಹಾಗೂ ದಾಖಲೆಗಳಿಲ್ಲದೇ ರೌಡಿಶೀಟರ್ ಗಳು ಬಳಕೆ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.