ನವದೆಹಲಿ, ನ. 9 : ಆಯೋಧ್ಯೆ ರಾಮ ಜನ್ಮಭೂಮಿ- ಬಾಬರಿ ಮಸೀದ್ ಭೂ ವಿವಾದ ಬಹುದೊಡ್ಡ ತೀರ್ಪು ಇಂದು ಹೊರ ಬೀಳಿಲಿದೆ. ಆಯೋಧ್ಯೆ ತೀರ್ಪಿಗೆ ಕ್ಷಣಗಣನೆ ಇದೆ. ಭಾರತ ಇತಿಹಾಸ ಅತಿದೊಡ್ಡ ವಿವಾಹದ ಹೊರ ಬೀಳದ್ದು, ದೇಶದ್ಯಂತ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಕರ್ನಾಟಕದಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಅಯೋಧ್ಯಯಲ್ಲಿನ ರಾಮ ಜನ್ಮಭೂಮಿ- ಬಾಬರಿ ಮಸೀದ್ ಸಂಬಂಧಿಸಿ ಭಾರಿ ಕುತೂಹಲಕ್ಕೆ ಕಾರಣವಾಗಿರುವ ನಿವೇಶನ ವಿವಾದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಲಿದೆ.
ಆದರೆ, ಅಯೋಧ್ಯೆ ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸುವ ಮೂಲಕ ಮುಖ್ಯ ನ್ಯಾ. ರಂಜನ್ ಗೊಗೋಯ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಸತತ 40 ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟಿಸಲು ಸಮಯ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 14, 15 ರಂದು ತೀರ್ಪು ಪ್ರಕಟವಾಗಬಹುದು ಎನ್ನುವ ನಿರೀಕ್ಷೆ ಇತ್ತು.
ಅಯೋಧ್ಯೆ ವಿಚಾರ ಬಹಳ ಸೂಕ್ಷ್ಮವಾಗಿರುವ ಕಾರಣ ಸಂವಿಧಾನ ಪೀಠ ಸಂಧಾನದ ಮೂಲಕ ಬಗೆಹರಿಸಲು ಮಧ್ಯಸ್ಥಿಕೆ ತಂಡವನ್ನು ರಚಿಸಿತು. ಈ ತಂಡ ನಡೆಸಿದ ಸಂಧಾನ ಪ್ರಕ್ರಿಯೆ ವಿಫಲವಾದ ಹಿನ್ನೆಲೆ ಅಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು.
ಇಂದು ತೀರ್ಪಿನ ದಿನಾಂಕ ಪ್ರಕಟಗೊಳ್ಳುವ ಮೊದಲೇ ರಂಜನ್ ಗೊಗೋಯ್ ಅವರು ಶುಕ್ರವಾರ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಮತ್ತು ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಸಿಂಗ್ ಅವರನ್ನು ಭೇಟಿಯಾಗಿ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದ್ದರು. ಆಯೋಧ್ಯ ರಾಮ ಜನ್ಮಭೂಮಿ- ಬಾಬರಿ ಮಸೀದ್ ಭೂ ವಿವಾದ ಬಹುದೊಡ್ಡ ತೀರ್ಪು ಇಂದು ಹೊರ ಬೀಳಿಲಿದೆ.