4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಹುಬ್ಬಳ್ಳಿ, 10. ನ : ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರು ಗ್ರಾಮದ ಮಾಬುಬಿ ನಿಸ್ಸಾರ್ ಅಹ್ಮದ್ ಅಕ್ಕಿ ಎಂಬ ಮಹಿಳೆ ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ನಾಲ್ಕು ಮಕ್ಕಳಿಗೆ ಇಂದು ಜನ್ಮ ನೀಡಿದ್ದಾರೆ.
ಮೂರು ಗಂಡು, ಒಂದು ಹೆಣ್ಣು ಮಗುವಿಗೆ ಮಹಾತಾಯಿ ಜನ್ಮ ನೀಡಿದ್ದಾರೆ. ಸಿಸೇರಿಯನ್ ಮೂಲಕ ವೈದ್ಯರು ಮಕ್ಕಳನ್ನು ಹೊರತೆಗೆದಿದ್ದಾರೆ. 4 ಮಕ್ಕಳು ಹಾಗೂ ತಾಯಿ ಆರೋಗ್ಯದಿಂದ ಇದ್ದಾರೆಂದು ಕಿಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos