ಯಲಹಂಕ, ನ. 19: ದಾಸನಪುರ ಹೋಬಳಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಧಾ ಡಿ ರವಿಕುಮಾರ್ ವಿವಿಧ ಕಾಮಗಾರಿಗಳಿಗೆ ಪೂಜೆಯನ್ನು ಸಲ್ಲಿಸಿ ಕಾಮಗಾರಿಗೆಚಾಲನೆ ನೀಡಲಾಯಿತು.
ಬಳಿಕ ಮಾತನಾಡಿದ ಸೊಂಡೆಕೊಪ್ಪ ಜಿಲ್ಲಾ ಪಂಚಾಯಿತಿ ಸದಸ್ಯೆ ಸುಧಾ ರವಿಕುಮಾರ್ ಮಾತನಾಡಿ ಜಿಲ್ಲಾ ಪಂಚಾಯತ್ ಅನುದಾನದಡಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಪೂಜೆಯನ್ನು ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಮ್ಮ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಎಲ್ಲಾ ಹಳ್ಳಿಗಳನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಅನೇಕ ಕೆಲಸಗಳನ್ನು ಮಾಡುತ್ತಿದ್ದೇವೆ ಇಂದು ಸೊಂಡೆಕೊಪ್ಪ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಮತ್ತು ರಸ್ತೆ ಡಾಂಬರೀಕರಣಕ್ಕೆ ಚಾಲನೆಯನ್ನು ನೀಡಿದೆವು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಿತ್ತನಹಳ್ಳಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ರವಿಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಸುಧಾ ಡಿ ರವಿಕುಮಾರ್ ಮತ್ತು ಗ್ರಾಮಸ್ಥರು ಇದ್ದರು.