ಬೆಂಗಳೂರು, ನ. 27 : ಪತಿರಾಯ ಪತ್ನಿಯನ್ನುಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿನಾಯಕ ನಗರದಲ್ಲಿ ನಡೆದಿದೆ. ತಮಿಳುನಾಡಿನ ಮುರುಗೇಶ್ (48) ಮತ್ತು ಪತ್ನಿ ವಸಂತಾ (35) ಮೃತಪಟ್ಟವರು. ಕೌಟುಂಬಿಕ ಕಲಹ ಕಾರಣಕ್ಕೆ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರಿಗೆ 13 ಮತ್ತು 11 ವರ್ಷ ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಕ್ಯಾಬ್ ಚಾಲಕನಾಗಿದ್ದ ಮುರುಗೇಶ್, ಇತ್ತೀಚೆಗೆ ಕೆಲಸಕ್ಕೆ ಹೋಗುತ್ತಿರಲಿಲ್ಲ. ಪತ್ನಿ ಬೇರೊಬ್ಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಯ ಜೊತೆ ಮುರುಗೇಶ್ ನಿತ್ಯ ಜಗಳ ಮಾಡುತ್ತಿದ್ದ. ಇದೇ ವಿಷಯಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ’ಎಂದು ಪೊಲೀಸ್ ಆಧಿಕಾರಿಯೊಬ್ಬರು ಹೇಳಿದರು.