ಮಂಡ್ಯ, ನ. 28: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕೆ.ಆರ್.ಪೇಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇಂದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ತನ್ನ ಕಾರಿನಲ್ಲಿ 52 ಲಕ್ಷ ರೂ ಹಣವನ್ನ ಸಾಗಿಸುತ್ತಿದ್ದರು. ಮದ್ದೂರು ತಾಲೂಕಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದ ವೇಳೆ ಹಣ ಪತ್ತೆಯಾಗಿದೆ.