ಬೆಂಗಳೂರು, ಡಿ. 13 : ನಗರದಲ್ಲಿಂದು ಕಾರೊಂದು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲದ ಅರಿಶಿನಗುಂಟೆ ಬಳಿ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ರೆನಾಲ್ಟ್ ಡಸ್ಟರ್ ಕಾರು ಸಾಗುತ್ತಿತ್ತು. ಈ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ, ಕಾರಿನಿಂದ ಇಳಿಯುತ್ತಿದಂತೆ ಕಾರು ಬೆಂಕಿಗೆ ಆಹುತಿಯಾಗಿದೆ.
ಎಂಜಿನ್ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ನೆಲಮಂಗಲ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದಾಗ್ಯೂ, ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.