ಬೆಂಗಳೂರು,ಡಿ. 14 : ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿಗೆ ಬೆಂಬಲ ನೀಡಬೇಕಿತ್ತು ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಪರೋಕ್ಷವಾಗಿ ದಳಪತಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷದ ವಿರುದ್ದ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಇಲ್ಲಿಯೂ ಕೂಡ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಬೇಕಿತ್ತೆಂದು ಅಭಿಪ್ರಾಯಪಟ್ಟರು.