7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ, ಇಂದು ಅಂತಿಮ ತೀರ್ಮಾನ

7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ, ಇಂದು ಅಂತಿಮ ತೀರ್ಮಾನ

ಬೆಂಗಳೂರು, ಡಿ. 18: ಇಂದು ಸರ್ಕಾರ ಮತ್ತು ಮಕ್ಕಳ ಹಕ್ಕುಗಳ ಆಯೋಗದ ನಡುವೆ ಮಾತುಕತೆ ನಡೆಯಲಿದ್ದು, 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರವಾಗಿ ಪರೀಕ್ಷೆ ನಡೆಸಬೇಕೇ ಬೇಡವೇ ಎಂಬ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪರೀಕ್ಷೆ ವ್ಯವಸ್ಥೆ ಬಗ್ಗೆಯೇ ತಿಳಿವಳಿಕೆ ಇಲ್ಲದೇ ಎಸ್ಎಸ್ಎಲ್ಸಿಯಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಆದರೆ, ಈ ಪ್ರಸ್ತಾವನೆಗೆ ಮಕ್ಕಳ ಹಕ್ಕು ಆಯೋಗ ಆಕ್ಷೇಪ ಎತ್ತಿದೆ. ಈ ಸಂಬಂಧ ಇಂದು ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಸಭೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos