ಕೊಡಗು, ಡಿ. 18: ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕುಮಟೂರು ಗ್ರಾಮದಲ್ಲಿ 60 ಸಾವಿರ ರೂಪಾಯಿ ಮೌಲ್ಯದ ಹಸು ಬಲಿಯಾಗಿದೆ.
ಹುಲಿ ದಾಳಿಯಿಂದ ಹಸು ಕಳೆದುಕೊಂಡಿರುವ ಬೆಳೆಗಾರರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅರಣ್ಯದಂಚಿನ ಗ್ರಾಮದಲ್ಲಿರುವ ಜನತೆ ಹುಲಿ ದಾಳಿಯಿಂದ ಕಂಗಾಲಾಗಿದ್ದಾರೆ. ಊರಿನಲ್ಲಿ ಬೀಡುಬಿಟ್ಟಿರುವ ಹುಲಿ ಸೆರೆ ಹಿಡಿಯುವಂತೆ ಆಗ್ರಹಿಸುತ್ತಿದ್ದಾರೆ.