ಬೆಂಗಳೂರು, ಡಿ.19 : ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದರು.
ಬೆಳಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಆಸ್ಪತ್ರೆಯ ಹಿರಿಯ ತಜ್ಞರೊಬ್ಬರು ಮುಖ್ಯಮಂತ್ರಿಗಳ ರಕ್ತದೊತ್ತಡ, ಮಧುಮೇಹ ಸೇರಿದಂತೆ ಮತ್ತಿತರ ತಪಾಸಣೆ ನಡೆಸಿದರು.
ಇತ್ತೀಚೆಗೆ ಬಿಡುವುದಿಲ್ಲ ಕಾರ್ಯಕ್ರಮದಲ್ಲಿ ಬಿಎಸ್ವೈ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಪ್ರತಿ ತಿಂಗಳು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಾರೆ. ಎಂದಿನಂತೆ ಇಂದು ಕೂಡ ಅವರು ತಪಾಸಣೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.