ಅಧಿಕಾರಿಗಳ ವಿರುದ್ಧ ಆಕ್ರೋಶ

ಅಧಿಕಾರಿಗಳ ವಿರುದ್ಧ ಆಕ್ರೋಶ

ಬೆಳಗಾವಿ,ಡಿ. 23 : ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬೆಳಗಾವಿ ನಗರದಲ್ಲಿ ಕಮಾಂಡೆಂಟ್ ಕಂಟ್ರೋಲ್ ಸೆಂಟರ್ ಇಲ್ಲದೆ ಬಸ್ ಶೆಲ್ಟರ್ ಗಳನ್ನು ನಿರ್ಮಾಣ ಮಾಡಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ಮೊದಲ 20 ನಗರಗಳಲ್ಲಿ ಬೆಳಗಾವಿ ಮಹಾನನಗರ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿ ನಾಲ್ಕು ವರ್ಷ ಕಳೆದರೂ ಕೇವಲ ನಾಲ್ಕೇ ಕಾಮಗಾರಿ ಮಾಡಲಾಗಿದೆ.
ಬೆಳಗಾವಿ ನಗರದ ಸ್ಮಾರ್ಟ್ ಸಿಟಿ ಅಧಿಕಾರಿಗಳು ಈ ಯೋಜನೆಯಲ್ಲಿ ಬಸ್ ಶೆಲ್ಟರ್ ಗಳ ನಿರ್ಮಾಣ ಮಾಡಿದ್ದಾರೆ. ಆದರೆ ಸ್ಮಾರ್ಟ್ ಸಿಟಿಯ ಈ ಶೆಲ್ಟರ್ ನಿರ್ಮಾಣ ಮಾಡುವ ಮುನ್ನ ಪ್ರಯಾಣಿಕರಿಗೆ ಬಸ್ ಬರುವ ವೇಳೆ ಹಾಗೂ ನಿಲ್ದಾಣದ ಬಗ್ಗೆ ತಿಳಿಸಬೇಕಿತ್ತು. ಆದರೆ ಆ ವ್ಯವಸ್ಥೆ ಸ್ಮಾರ್ಟ್ ಸಿಟಿ ಬಸ್ ಶೆಲ್ಟರ್ ನಲ್ಲಿ ಇರದಿರುವುದಕ್ಕೆ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos