`ಕಲಬುರ್ಗಿ, ಡಿ. 25: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ತೊಗರಿಬೆಳೆ ವಿತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಫಲಾನುಭವಿಗಳಿಗೆ ಶೀಘ್ರವೇ ತೊಗರಿಬೆಳೆ ವಿತರಣೆ ಮಾಡಲಾಗುವುದು. ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ತೊಗರಿಬೇಳೆ ಬೆಲೆ ಒಂದು ಕೆಜಿಗೆ 100 ರಿಂದ 120ರೂ. ಜಾಸ್ತಿ ಆಗಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಇದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸಾರ್ವಜನಿಕರ ಕರಗೆ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.