ಬೈಕ್ ಡಿಕ್ಕಿ ಯುವಕ ಸಾವು

ಬೈಕ್ ಡಿಕ್ಕಿ ಯುವಕ ಸಾವು

ಚಿಕ್ಕಬಳ್ಳಾಪುರ,  ಡಿ. 26: ಕಾಲೇಜಿಗೆ ತೆರಳುವ ವೇಳೆ ಬೈಕ್ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚೇಳೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಕಾಲೇಜು ವಿದ್ಯಾರ್ಥಿ ಸಾವುಚೇಳೂರು ತಾಲೂಕಿನ ಸಜ್ಜಲವಾರಪಲ್ಲಿ ನಿವಾಸಿ ಸುರೇಂದ್ರ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಚಿಂತಾಮಣಿ ನಗರದಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸುರೇಂದ್ರ ಕಾಲೇಜಿಗೆ ಹೋಗುವ ವೇಳೆ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ. ಚಿಂತಾಮಣಿ-ಚೇಳೂರು ಮಾರ್ಗದ ಚಿಲಕನೇರ್ಪು ಬಳಿ ಬೈಕ್ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಮೃತ ವಿದ್ಯಾರ್ಥಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos