ಬೆಂಗಳೂರು, ಡಿ. 31 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿದ್ದು, ಆಟೋ ಚಾಲಕ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಯಶವಂತಪುರ ಬಳಿ ಅಪಘಾತ ನಡೆದಿದ್ದು, ಮುಖ್ಯಮಂತ್ರಿಗಳ ಬೆಂಗಾವಲು ವಾಹನ ಡಿವೈಡರ್ ಏರಿ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ನಂತರ ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಆಟೋ ಚಾಲಕ ಗಾಯಗೊಂಡಿದ್ದಾನೆ. ಸಿಎಂ ಯಡಿಯೂರಪ್ಪ ಅವರ ಕಾರ್ಯದರ್ಶಿ ಸೆಲ್ವಕುಮಾರ್ ಇದ್ದ ಕಾರು ಡಿಕ್ಕಿಯಾಗಿದೆ.