ತುಮಕೂರು, ಡಿ. 31: ಜನವರಿ 2ರಂದು ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡಲಿದ್ದು, ನಡೆದಾಡುವ ದೇವರು ಶಿವಕುಮಾರ ಸ್ವಾಮಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜನವರಿ 2ರಂದು ಪ್ರಧಾನಿ ತುಮಕೂರಿಗೆ ಆಗಮಿಸಲಿದ್ದು, ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ. ಬಳಿಕ ಶಿವಕುಮಾರಸ್ವಾಮಿ ವಸ್ತು ಸಂಗ್ರಹಾಲಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಭಾಷಣ ಮಾಡಲಿದ್ದಾರೆ.