ಬೆಂಗಳೂರು, ಜ. 04: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮತ್ತೆ ಇಂದು ರಾಜ್ಯದಲ್ಲಿ ಪ್ರತಿಭಟನೆ ಕಾವು ಜೋರಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಯಲಿದೆ.
ಹೌದು,ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ, ಇಂದು ಬೆಂಗಳೂರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು, ಎಡಪಂಥೀಯ ಸಂಘಟನೆಗಳಿಂದ ಪ್ರತಿಭಟನೆ ಮುಂದುವರೆದಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಯಿತು. ಸಂಜೆ 4 ಗಂಟೆಗೆ ಟೌನ್ ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ. ಬನ್ನೇರುಘಟ್ಟ, ಈದ್ಗಾ ಮೈದಾನ,ಆರ್.ಟಿ.ನಗರ, ಹೊಸೂರು ರಸ್ತೆ, ಮಹಾರಾಣಿ ಕಾಲೇಜ್ ಸುತ್ತಮುತ್ತ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ.