ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಬೆಂಗಳೂರು, ಜ. 25: ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆ. 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಜುಲೈ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/-ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ https://www.indianbank.net.in/jsp/IBSDisclaimer.jsp ಗೆ ಭೇಟಿ ನೀಡಿ.

 

ಫ್ರೆಶ್ ನ್ಯೂಸ್

Latest Posts

Featured Videos